ರಿಯೋಡಿಜೆನೆರೋ, (ಬ್ರೆಜಿಲ್) : ಬ್ರೆಜಿಲ್‌ನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಲಕ್ಷದ ಗಡಿ ದಾಟಿದೆ. ಇದುವರೆಗೂ ಬ್ರೆಜಿಲ್‌ನಲ್ಲಿ 3೦ ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದೆ. ಕಳೆದ ಮೂರು ತಿಂಗಳಲ್ಲಿ ಕೊರೊನೊ ವೈರಸ್ ಸಂಖ್ಯೆ 50 ಸಾವಿರ ಮಂದಿ ಮೃತಪಟ್ಟಿದ್ದಾರೆ.
ಹಿಂದಿನ 50 ದಿನಗಳಿಗೆ ಹೋಲಿಸಿದರೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ದ್ವಿಗುಣಗೊಂಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಸೋಂಕು ತಡೆಗಟ್ಟಲು ಹಲವು ಕ್ರಮ ಕೈಗೊಂಡಿದ್ದಾರೆ
ಕೊರೋನಾ ಸೋಂಕಿನಿಂದಾಗಿ ಬ್ರೆಜಿಲ್‌ನಲ್ಲಿ ಆರ್ಥಿಕತೆ ಕುಸಿದಿದ್ದು ಅಧ್ಯಕ್ಷರಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಕೊರೊನೊ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಧ್ಯವಾದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧ್ಯಕ್ಷ ಜೈರ್ ಬೋಲ್ಸನಾರೊ ತಿಳಿಸಿದ್ದಾರೆ.
ಬ್ರೆಜಿಲ್‌ನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸೋಂಕು ತಡೆಗಟ್ಟಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಸ್ವತಃ ಕೊರೊನಾ ಸೋಂಕಿಗೆ ಬಾಧಿತರಾದ ಜಿಲ್ಲಾಧ್ಯಕ್ಷರು ಕೊರೊನಾ ಸೋಂಕನ್ನು ಸಣ್ಣ ಸಣ್ಣ ಜ್ವರ ಇದ್ದ ಹಾಗೆ ಎಂದು ಹೇಳಿದ್ದಾರೆ. ಬ್ರೆಜಿಲ್‌ನಲ್ಲಿ ಇದುವರೆಗೂ ಕೊರೊನಾ ವೈರಸ್ ಒಂದು ಲಕ್ಷದ 477 ಮಂದಿ ಸಾವನ್ನಪ್ಪಿದ್ದು 30,12,472 ಲಕ್ಪ್ರಣಗಳು ದಾಖಲಾಗಿವೆ ಎಂದು ಸಚಿವಾಲಯ ತಿಳಿಸಿದೆ. ಅಮೆರಿಕ ಹೊರತುಪಡಿಸಿ ಬ್ರೆಜಿಲ್‌ನಲ್ಲಿ ಸೋಂಕಿತರ ಸಂಖ್ಯೆ ಎರಡನೇ ಸ್ಥಾನದಲ್ಲಿದೆ. ಬ್ರೆಜಿಲ್‌ನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಹಾಟ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ 1000ಕ್ಕೂ ಅಧಿಕ ಕೆಂಪು ಬಲೂನುಗಳನ್ನು ಆಕಾಶಕ್ಕೆ ಹಾರಿ ಬಿಟ್ಟಿದ್ದು ಆ ಮೂಲಕ ಕೊರೊನಾ ಸೋಂಕಿನ ಕುರಿತು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಬ್ರೆಜಿಲ್‌ನಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.