ರಾಮನಗರ: ಜಿಲ್ಲೆಯಲ್ಲಿ ಇಂದು ಡಿ. ಕೆ. ಸುರೇಶ್ ಮತ್ತು ಅಶ್ವಥ್ ನಾರಾಯಣ್ ನಡುವೆ ನಡೆದ ಹೈ ಡ್ರಾಮಕ್ಕೆ ಪರೋಕ್ಷವಾಗಿ ತಿರುಗೇಟು ಕೊಟ್ಟಿದ್ದಾರೆ ಮುಖ್ಯಮಂತ್ರಿಗಳು…
ರಾಮನಗರದಲ್ಲಿ ನಾವು ಈಗಿನಿಂದಲೇ ರಾಜಕಾರಣ ಮಾಡುವ ಅಗತ್ಯವಿಲ್ಲ. ರಾಮನಗರ ಜಿಲ್ಲೆಗೆ ಕೊಡುಗೆ ನೀಡಲೆಂದು ಅಭಿಮಾನದಿಂದ ಬಂದಿದ್ದೇನೆ. ಹೊರತು ಇಲ್ಲಿ ಬಂದು ಪ್ರಚಾರ ಪಡೆಯಬೇಕೆಂದು ಬಂದಿಲ್ಲ. ಜಿಲ್ಲೆಯ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸೋಣ ಎಂದು ಸಂಸದ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವತ್ಥನಾರಾಯಣ ಗಲಾಟೆಗೆ ಪರೋಕ್ಷವಾಗಿ ಚಾಟಿ ಬೀಸಿದರು. ರಾಮನಗರ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗುವ ಜಿಲ್ಲೆ. ಅಭಿಮಾನ, ಸಂತಸದಿಂದ ರಾಮನಗರಕ್ಕೆ ಬಂದಿದ್ದೇನೆ ಹೊರತು, ರಾಜಕಾರಣ ಮಾಡಲೆಂದು ಇಲ್ಲಿಗೆ ಬಂದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ರಾಮನಗರದಲ್ಲಿ ಇಂದು ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಚುನಾವಣೆಗೆ ಒಂದು ತಿಂಗಳಿರುವಾಗ ರಾಜಕಾರಣ ಮಾಡೋಣ.ಜ ಲಸಂಪನ್ಮೂಲ ಸಚಿವನಾಗಿ ಜಿಲ್ಲೆಗೆ ಬಂದಾಗ ಎಲ್ಲರೂ ಸ್ವಾಗತ ಮಾಡಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ ಆರ್ ಎಸ್ ಜಲಾಶಯದಲ್ಲಿ ನೀರು ಸೋರಿಕೆಯಾಗುತ್ತಿತ್ತು. ಜಲಾಶಯದ ಗೇಟ್ ಗೆ ಗೋಣಿಚೀಲ ಕಟ್ಟಿದ್ದರು. ಒಂದೂವರೆ ವರ್ಷದಲ್ಲಿ ಎಲ್ಲಾ ಗೇಟ್ ಗಳನ್ನು ಸರಿಪಡಿಸಿದ್ದೆವು. ಇಂದಿನ ಘಟನೆ ಅಭಿವೃದ್ಧಿ ಮೇಲೆ ಯಾವುದೇ ಪರಿಣಾಮವನ್ನೂ ಬೀರಲ್ಲ ಎಂದು ಹೇಳಿದರು.