ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಶೈಕ್ಷಣಿಕ ಪ್ರಕ್ರಿಯೆಗಳಿಗೆ ಈಗಾಗಲೇ ಬ್ರೇಕ್ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಮೊದಲಿಗೆ ಆನ್ ಲೈನ್ ತರಗತಿಗಳು, ಬಳಿಕ ಆಫ್ಲೈನ್ ತರಗತಿಗಳನ್ನು ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸೆ.1 ರಿಂದ ಕಾರ್ಯಾರಂಭ ಮಾಡುವುದಾಗಿ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಆದರೆ, ಕೇಂದ್ರ ಸರ್ಕಾರದಿಂದ ಅನುಮತಿ ಬೇಕಿದ್ದು, ಅಲ್ಲಿನ ನಿರ್ದೇಶನ ಹಾಗೂ ಮಾರ್ಗಸೂಚಿಗಳಿಗಾಗಿ ಕಾಯಲಾಗುತ್ತಿದೆ. ಅಲ್ಲಿಂದ ಬರುವ ನೀತಿಗಳಿಗನುಸಾರವಾಗಿ ಇಲ್ಲಿ ಯಾವ ಕ್ರಮಗಳನ್ನು ಕೈಗೊಳ್ಳಬಹುದು ಎಂದು ನಿರ್ಧರಿಸಿ ತೀರ್ಮಾನ ಕೈಗೊಳ್ಳಬಹುದು ಎಂದು ಸಚಿವರು ತಿಳಿಸಿದರು.
ಪ್ರಸ್ತುತ ಸೆ.1ರಿಂದ ಆನ್ ಲೈನ್ ಮೂಲಕ ಪದವಿ ತರಗತಿಗಳನ್ನು ಪ್ರಾರಂಭಿಸಿ, ಅಕ್ಟೋಬರ್ ವೇಳೆಗೆ ಕಾಲೇಜುಗಳಲ್ಲಿ ತರಗತಿಗಳನ್ನು ಪುನಾರಂಭ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆಗಳಿವೆ. ಯಾವುದಕ್ಕೂ ಕೇಂದ್ರದ ನಿರ್ದೇಶನ ಬಾರದು ಹೊರತು ತೀರ್ಮಾನ ಕೈಗೊಳ್ಳಲಾಗದು ಎಂದು ಅವರು ತಿಳಿಸಿದ್ದಾರೆ.