ಬೆಂಗಳೂರು: ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಆಸ್ಪತ್ರೆಯಲ್ಲಿದ್ದು, ಬಳಿಕ ಮಾತೃವಿಯೋಗವಾಗಿದ್ದರಿಂದ ಬಳ್ಳಾರಿಗೆ ಹೋಗಿ ಕಾರ್ಯಗಳನ್ನು ಮುಗಿಸಿದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಈಗ ಸಂಪೂರ್ಣ ಗುಣಮುಖರಾಗಿದ್ದು, ಗುರುವಾರದಿಂದ ಕರ್ತವ್ಯಕ್ಕೆ ಹಾಜರಾಗುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಶ್ರೀರಾಮುಲು, ನಾನು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ನಾಳೆಯಿಂದಲೇ ಸಾರ್ವಜನಿಕ ಸೇವೆಗೆ ಮರಳುವುದಾಗಿ ಹೇಳಿಕೊಂಡಿದ್ದಾರೆ.
ಆ. 9ರಂದು ಕೊರೋನಾ ಸೋಂಕಿಗೆ ತುತ್ತಾಗಿದ್ದ ಸಚಿವ ಶ್ರೀರಾಮುಲು, ಖಾಸಗಿ ಆಸ್ಪತ್ರೆಗೆ ದಾಖಲಾಗದೆ, ಸರ್ಕಾರಿ ಆಸ್ಪತ್ರೆಯಾದ ಶಿವಾಜಿನಗರದಲ್ಲಿರುವ ಬೌರಿಂಗ್ ನಲ್ಲಿ ದಾಖಲಾಗಿದ್ದರು. ಈ ಮೂಲಕ ಸಾರ್ವಜನಿಕರ ಪ್ರಶಂಸೆಗೂ ಪಾತ್ರರಾಗಿದ್ದರು.