ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಮ್ಮ 84 ನೇ ವಯಸ್ಸಿನಲ್ಲಿ ದೈವಾಧೀನರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು, ನಿಧನರಾಗಿದ್ದಾರೆ ಎಂದು ಪುತ್ರ ಅಭಿಜಿತ್ ಬ್ಯಾನರ್ಜಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಈ ಸಂಬಂಧ ಸೇನಾ ಆಸ್ಪತ್ರೆಯಲ್ಲಿ ನುರಿತ ತಜ್ಞರಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. 2012ರಿಂದ 2017ರವರೆಗೆ ದೇಶದ 13ನೇ ರಾಷ್ಟ್ರಪತಿಯಾಗಿ ಕಾಯ ನಿರ್ವಹಿಸಿದ್ದ ಅವರು, ಕಾಂಗ್ರೆಸ್ ಪಕ್ಷದ ಅನೇಕ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಅವರ ಪುತ್ರ ಅಭಿಜಿತ್ ಬ್ಯಾನರ್ಜಿ, ಆರ್ ಆರ್ ಆಸ್ಪತ್ರೆಯ ನುರಿತ ವೈದ್ಯರ ಸತತ ಪ್ರಯತ್ನದ ನಡುವೆಯೂ ಕೊನೆಯುಸಿರೆಳೆದಿರುವ ನನ್ನ ತಂದೆಯ ಕ್ಷೇಮಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಟ್ವೀಟಿಸಿದ್ದಾರೆ.
With a Heavy Heart , this is to inform you that my father Shri #PranabMukherjee has just passed away inspite of the best efforts of Doctors of RR Hospital & prayers ,duas & prarthanas from people throughout India !
I thank all of You 🙏— Abhijit Mukherjee (@ABHIJIT_LS) August 31, 2020