ಕನ್ನಡ ಮಾತನಾಡಿದ KSRTC ಬಸ್ ಕಂಡಕ್ಟರ್ ಮೇಲಿನ ಮರಾಠಿ ಪುಂಡರ ಹಲ್ಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕನ್ನಡ ಪರ ಹೋರಾಟಗಾರರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದಾದರೂ ಮರಾಠಿ ಪುಂಡರ ದರ್ಪ ಕಡಿಮೆಯಾಗುತ್ತದೆಯೇ ಎಂಬ ಪ್ರಶ್ನೆ ಮುಂದುವರಿದಿದೆ. ಈ ಹಿನ್ನಲೆಯಲ್ಲಿ, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ಪ್ರತಿಕ್ರಿಯೆ ನೀಡಿದ್ದು, ಮಾರ್ಚ್ 22 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ.