ಬೆಂಗಳೂರು: ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಈಗಾಗಲೇ ದೂರದರ್ಶನ ಚಂದನ ವಾಹಿನಿಯಲ್ಲಿ ಸೇತುಬಂಧ ಕಾರ್ಯಕ್ರಮ ಪ್ರಸಾರವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಇದರ ಅನುಕೂಲ ಪಡೆದುಕೊಂಡಿದ್ದಾರೆ.
ಇದೀಗ ಇದರ ಮುಂದುವರೆದ ಸರಣಿಯ ಭಾಗವಾಗಿ ಇದೇ 17ರಿಂದ ಸೆಪ್ಟೆಂಬರ್ 11ರವರೆಗೆ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮ ಪ್ರಸಾರವಾಗಲಿದೆ.
8ರಿಂದ 10ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ಈ ಕ್ಲಾಸ್ ನಡೆಯಲಿದ್ದು, ದೂರದರ್ಶನದ ಚಂದನ ವಾಹಿನಿಯಲ್ಲಿ ಪ್ರಸಾರ ಆಗಲಿದೆ ಎಂದು ಡಿಎಸ್ಇಆರ್‌ಟಿ ಮಾಹಿತಿ ನೀಡಿದೆ.
ವೇಳಾಪಟ್ಟಿ ಹೀಗಿದೆ: ಸಂವೇದ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮದ ವೇಳಾಪಟ್ಟಿ ಹೀಗಿದೆ:
ಕನ್ನಡ, ಇಂಗ್ಲಿಷ್ (ಪ್ರಥಮ ಹಾಗೂ ದ್ವಿತೀಯ ಭಾಷೆ) ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಪ್ರಥಮ ಭಾಷೆ ಸಂಸ್ಕೃತ, ಹಿಂದಿ (ತೃತೀಯ) ಮತ್ತು ಪ್ರಥಮ ಭಾಷೆ ಉರ್ದು ವಿಷಯಗಳಲ್ಲಿ ಸಿದ್ಧಪಡಿಸಿರುವ ಪಾಠಗಳನ್ನು ಪ್ರತಿ ದಿನ ಬೆಳಗ್ಗೆ 9.30ರಿಂದ 11 ಗಂಟೆಯವರೆಗೆ, 11.30ರಿಂದ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3 ರಿಂದ 4.30ರವರೆಗೆ ಹಾಗೂ 5 ರಿಂದ 5.30ರವರೆಗೆ ನಿಗದಿತ ವೇಳಾಪಟ್ಟಿಯಂತೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದೆ.