ಬೆಂಗಳೂರು: ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇತ್ತೀಚೆಗೆ ಚಂದನ್ ಶೆಟ್ಟಿ ಬಿಡುಗಡೆ ಮಾಡಿದ ಕೋಲುಮಂಡೆ ಹಾಡಿನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂದು ಮಲೆ ಮಹದೇಶ್ವರ ಭಕ್ತರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಚಂದನ್ ಶೆಟ್ಟಿ ಹಾಡಿರುವ ಹೊಸ ಕೋಲುಮಂಡೆ ಜಂಗಮದೇವ ಹಾಡಿನಲ್ಲಿ ಶಿವಶರಣೆ ಸಂಕವ್ವನನ್ನು ಅಸಭ್ಯವಾಗಿ ಚಿತ್ರಿಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಇದಕ್ಕೂ ಮುನ್ನ ನಿನ್ನೆ ವಿಡಿಯೋ ಬಗ್ಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ವಿಡಿಯೋವನ್ನು ಡಿಲೀಟ್ ಮಾಡಿದ್ದ ಚಂದನ್ ಶೆಟ್ಟಿ ಕ್ಷಮೆಯನ್ನೂ ಕೇಳಿದ್ದರು. ಸದ್ಯಕ್ಕೆ ದೂರು ಸ್ವೀಕರಿಸಿ ಎನ್‌ಸಿಆರ್ ದಾಖಲು ಮಾಡಿರುವ ಪೊಲೀಸರು, ತನಿಖೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.