ಜಾರ್ಖಂಡ್: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದು, ಧೋನಿ ಭಾರತೀಯ ಕ್ರಿಕೆಟ್‌ಗೆ ನೀಡಿದ ಅಮೂಲ್ಯ ಕ್ಷಣಗಳನ್ನು ನೆನೆದು ಅಭಿಮಾನಿಗಳು ಭಾವುಕರಾಗಿದ್ದಾರೆ.
ಸ್ವಾತಂತ್ರ್ಯ ದಿನದ ಸಾಯಂಕಾಲ 7.30ರಿಂದ ನಾನು ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದೇನೆ ಎಂದು ಭಾವಿಸಬೇಕು ಎಂದಿರುವ ಧೋನಿ, ಮೈದಾನದಲ್ಲಿ ಕಳೆದ ಕ್ಷಣಗಳನ್ನು ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅನೇಕರು ರನೌಟ್‌ನಿಂದ ಕ್ರಿಕೆಟ್ ಕೆರಿಯರ್ ಆರಂಭಿಸಿ, ರನೌಟ್‌ಗೆ ಮುಕ್ತಾಯಗೊಳಿಸಿದ ಧೋನಿ ಕ್ರಿಕೆಟ್ ಪಯಣ ಮೆಚ್ಚುವಂತದ್ದು ಎಂದು ಟ್ವೀಟ್ ಮಾಡಿದ್ದಾರೆ.
ಧೋನಿ ಹಂಚಿಕೊಂಡ ವಿಡಿಯೋ ಇಲ್ಲಿದೆ ನೋಡಿ..