ಬೆಂಗಳೂರು: ಕೊರೋನಾ ಸೇರಿದಂತೆ ವಿವಿಧ ಕಾರಣಗಳಿಗೆ ಆರ್ಥಿಕತೆ ಹಾಗೂ ಉದ್ಯೋಗದ ಪ್ರಮಾಣ ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಲಿದೆ. ಈಗ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಕೊಪ್ಪಳ ಜಿಲ್ಲೆಯಲ್ಲಿ ದೇಶದ ಮೊದಲ ಆಟಿಕೆ ಉತ್ಪಾದನಾ ಕೇಂದ್ರವನ್ನು ಪ್ರಾರಂಭಿಸಿರುವುದಾಗಿ ಘೋಷಿಸಿದ್ದು, ಇದನ್ನು ಖುದ್ದು ಪ್ರಧಾನಿಗಳಾದ ನರೇಂದ್ರ ಮೋದಿಯವರು ಪ್ರಶಂಶಿಸಿದ್ದಾರೆ.
ಸರಿಸುಮಾರು 5 ಸಾವಿರ ಕೋಟಿ ರೂಪಾಯಿಯ ಯೋಜನೆ ಇದಾಗಿದ್ದು, ಆಟಿಕೆ ಉತ್ಪಾದನಾ ಕೇಂದ್ರವನ್ನು ತೆರೆಯುವ ಮೂಲಕ ಸ್ಥಳೀಯವಾಗಿ ಹಾಗೂ ರಾಜ್ಯದ ಹಲವು ಭಾಗಗಳಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ ರೂಪದಲ್ಲಿ ಉದ್ಯೋಗ ದೊರೆತಂತಾಗುತ್ತದೆ ಎಂಬ ಉದ್ದೇಶ ರಾಜ್ಯಸರ್ಕಾರದ್ದಾಗಿದೆ.
ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕ್ರಮವನ್ನು ಸ್ವತಃ ಪ್ರಧಾನಿ ಮೋದಿ ಅವರು ಶ್ಲಾಘಿಸಿದ್ದಲ್ಲದೆ, ಇಂತಹ ಪ್ರಯತ್ನಗಳು ಆಗಬೇಕು ಎಂದು ಹೇಳಿದ್ದಾರೆ.