21ರಂದು ಕೆ ಆರ್ ಎಸ್ ಗೆ ಮುಖ್ಯಮಂತ್ರಿಗಳಿಂದ ಬಾಗಿನ

Spread the love

ಬೆಂಗಳೂರು: ರಾಜ್ಯ ಹಾಗೂ ಪಕ್ಕದ ರಾಜ್ಯಗಳಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯೂ ರಾಜ್ಯದ ಜಲಾಶಯಗಳು ತುಂಬಿ ಹರಿಯುತ್ತಿವೆ. ಇದೇ ವೇಳೆ ಪ್ರಮುಖ ಜಲಾಶಯಗಳಲ್ಲಿ ಒಂದಾದ ಕೃಷ್ಣರಾಜಸಾಗರ ಹಾಗೂ ಕಬಿನಿ ಸಹ ತುಂಬಿದೆ. ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಲು ಇದೇ ಆ. 21ರಂದು ಮಂಡ್ಯ ಹಾಗೂ ಮೈಸೂರಿಗೆ ಆಗಮಿಸಲಿದ್ದಾರೆ.

ಕೃಷ್ಣರಾಜಸಾಗರ ಹಾಗೂ ಕಬಿನಿ ಜಲಾಶಯಗಳು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ ಯಡಿಯೂರಪ್ಪ ಅವರು ಇದೇ ಆಗಸ್ಟ್ 21ರಂದು ಬಾಗಿನವನ್ನು ಅರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿ ಮಂಡ್ಯ ಉಸ್ತುವಾರಿ ಸಚಿವರಾದ ಕೆ. ನಾರಾಯಣ ಗೌಡ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಉಪಸ್ಥಿತರಿರುವರು ಎಂದು ಹೇಳಲಾಗಿದೆ.


Spread the love

Leave a Reply

Your email address will not be published. Required fields are marked *