ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ತುಸು ಏರುಪೇರಾಗಿದ್ದು, ಕೋಮಾ ಸ್ಥಿತಿಯಲ್ಲಿಯೇ ಅವರಿಗೆ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಅವರಿಗೆ ಆ ನಿಟ್ಟಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದೇ ವೇಳೆ ಮಂಗಳವಾರ ರಾತ್ರಿಯಿಂದ ಅವರ ಮೂತ್ರಪಿಂಡಗಳ ಕಾರ್ಯನಿರ್ವಹಣೆಯಲ್ಲೂ ಏರುಪೇರಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮೆದಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಪ್ರಣಬ್ ಅವರಿಗೆ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೀಗ ಶ್ವಾಸಕೋಶದ ತೊಂದರೆಯಿಂದ ಅವರ ಆರೋಗ್ಯದ ಮೇಲೆ ಮತ್ತಷ್ಟು ಪ್ರತಿಕೂಲ ಪರಿಣಾಮ ಬೀರುವಂತಾಗಿದೆ.
ಪ್ರಣಬ್ ಅವರನ್ನು ಆಗಸ್ಟ್ 10ರಂದು ದೆಹಲಿಯ ಕಂಟೋನ್ಮೆಂಟ್ ಸೇನಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಪರಿಣಾದ ಅದರ ಶಸ್ತ್ರಚಿಕಿತ್ಸೆಗೆ ಒಳಪಡಿಸಬೇಕಾದಾಗ ಕೊರೊನಾ ಪರೀಕ್ಷೆ ಮಾಡಿಸಿದ್ದು, ಪಾಸಿಟಿವ್ ಬಂದಿತ್ತು. ಶಸ್ತ್ರಚಿಕಿತ್ಸೆ ಬಳಿಕ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಅವರನ್ನು ಸದ್ಯ ಚಿಕಿತ್ಸೆಗೊಳಪಡಿಸಲಾಗಿದೆ.