ಮಾಜಿ ರಾಷ್ಟ್ರಪತಿ ಪ್ರಣಬ್ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರ

Spread the love

ನವದೆಹಲಿ, ಆ.೧೩– ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಮತ್ತಷ್ಟು ಗಂಭೀರ ವಾಗಿದ್ದು ಅವರು ಕೋಮಾಗೆ ಹೋಗಿದ್ದಾರೆ ಎಂದು ಸೇನಾ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ದೆಹಲಿಯಲ್ಲಿರುವ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಯಲ್ಲಿ ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಪ್ರಣಮ್ ಮುಖರ್ಜಿ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದೆ ಅದರ ಮೂಲಕ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ. ಕೋಮಾಗೆ ಹೋಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕಳೆದವಾರ ಮನೆಯಲ್ಲಿ ಮನೆಯಲ್ಲಿ ಜಾರಿ ಬಿದ್ದು ಅನಾರೋಗ್ಯಕ್ಕೆ ಒಳಗಾದ ಪ್ರಣಬ್ ಮುಖರ್ಜಿಯವರನ್ನು ಸೇನಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಅವರ ಮೆದುಳಿನಳ್ಳಿ ರಕ್ತ ಹೆಪ್ಪುಗಟ್ಟಿದೆ ಎಂದು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು.
ಜೊತೆಗೆ ಪ್ರಣಬ್ ಮುಖರ್ಜಿ ಅವರಿಗೆ ಕರೋನಾ ವೈರಸ್ ಖಚಿತವಾಗಿತ್ತು. ಶಸ್ತ್ರಚಿಕಿತ್ಸೆಯ ಬಳಿಕ ಪ್ರಣಬ್ ಮುಖರ್ಜಿ ಅವರು ಮೂಲಕ ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಲಾಗಿತ್ತು ಆರೋಗ್ಯದಲ್ಲಿ ಬಿಗಡಾಯಿಸುತ್ತಿದೆ ಕೋಮಾಗೆ ಹೋಗಿದ್ದಾರೆ.
ವದಂತಿ ಬೇಡ: ಪ್ರಣಬ್ ಮುಖರ್ಜಿ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇಲ್ಲಸಲ್ಲದ ಸುದ್ದಿಗಳನ್ನು ಹಬ್ಪಿಸುವುದನ್ನು ಕೂಡಲೇ ನಿಲ್ಲಿಸಿ ತಂದೆಯವರ ಆರೋಗ್ಯ ಸ್ಥಿತಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಿತ್ತರವಾಗುವ ರೀತಿ ಕೆಟ್ಟದಾಗಿ ಇಲ್ಲ .ಸುಳ್ಳು ಸುದ್ದಿಗಳನ್ನು ಹಬ್ಪಿಸುವುದನ್ನು ಬಿಡಿ
ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ತಿಳಿಸಿದ್ದಾರೆ.ನೆನ್ನೆಯಷ್ಟೇ ಪುತ್ರಿ ಶರ್ಮಿಷ್ಟ ಮುಖರ್ಜಿ ಅವರು ಕೂಡ ಸುಳ್ಳು ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಬೇಕು ಎಂದು ಸುಳ್ಳು ಸುದ್ದಿ ಹಬ್ಬಿಸುವವರಿಗೆ ಕಿವಿಮಾತು ಹೇಳಿದರು
ಪ್ರಣಬ್ ಮುಖರ್ಜಿ ಅವರ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಬದಲು ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸಿ ಎಂದು ಅವರು ಮನವಿ ಮಾಡಿದ್ದಾರೆ. ಕಳೆದ ವರ್ಷ ಆಗಸ್ಟ್ ೮ರಂದು ಪ್ರಣಬ್ ಮುಖರ್ಜಿಯವರು ಭಾರತರತ್ನ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.
೮೪ ವರ್ಷದ ಪ್ರಣಬ್ ಮುಖರ್ಜಿ ಅವರು ಈ ಹಿಂದೆ ನಡೆದಿದ್ದ ಅಪಘಾತದಿಂದ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು ಹಾಗೆಯೇ ಮುಂದುವರೆದಿತ್ತು ಇದೀಗ ಆ ಸಮಸ್ಯೆ ಬಿಗಡಾಯಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.


Spread the love

Leave a Reply

Your email address will not be published. Required fields are marked *