ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ನಗರದ ಇಬ್ಬರು ನಿಧನರಾಗಿರುವ ಬಗ್ಗೆ ರವಿವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 206ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ತಿಳಿಸಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹದಿಂದ ಬಳಲುತ್ತಿದ್ದ ಕಲಬುರಗಿಯ ಸಾಯಿ ಮಂದಿರ ಬಳಿ ಆನಂದೇಶ್ವರ ನಗರದ 65 ವರ್ಷದ ವೃದ್ಧೆ (P-208654) ಆ.10 ರಂದು ಆಸ್ಪತ್ರೆಗೆ ದಾಖಲಾಗಿ ಆ.22 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ಹೃದ್ರೋಗದಿಂದ ಬಳಲುತ್ತಿದ್ದ ಕಲಬುರಗಿಯ ರಾಮ ಮಂದಿರ ಬಳಿಯ ನಿವಾಸಿ 60 ವರ್ಷದ ವೃದ್ಧ (P-322283) ಆ.27 ರಂದು ಆಸ್ಪತ್ರೆಗೆ ದಾಖಲಾಗಿ ಆ.29 ರಂದು ನಿಧನರಾಗಿದ್ದಾರೆ ಎಂದು ಡಿ.ಸಿ. ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ತಿಳಿಸಿದ್ದಾರೆ.